ಅಯೋಧ್ಯಾ ಶ್ರೀರಾಮ ಮಂದಿರದ ಉದ್ಘಾಟನೆ ಹಾಗೂ ರಾಮ ಮಂದಿರ ಗರ್ಭ ಗೃಹದಲ್ಲಿ ರಾಮ ಲಲ್ಲಾ ವಿಗ್ರಹದ ಪ್ರಾಣ ಪ್ರತಿಷ್ಠಾಪನೆಯ ಧಾರ್ಮಿಕ ವಿಧಿ ವಿಧಾನಗಳು ವಿದ್ಯುಕ್ತವಾಗಿ ಆರಂಭವಾದ ದಿನ ಜನವರಿ 22...
ದೇಶದೆಲ್ಲೆಡೆ ಸಂಭ್ರಮ ಮನೆ ಮಾಡಿರುವಂತೆ ಸೂಳಿಕೇರಿ ಗ್ರಾಮದಲ್ಲೂ ಸಹ ಶ್ರೀರಾಮ ಮಂದಿರದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಗ್ರಾಮದ ಮಾರುತೇಶ್ವರ ದೇವಾಲಯದಿಂದ ರಾಮ ಮಂದಿರದವರೆಗೂ ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿತ್ತು. ಗ್ರಾಮದ ಪ್ರಮುಖ ಬೀದಿಗಳಲ್ಲಿ ಭಗವಾ ಧ್ವಜ, ಕೇಸರಿ ಧ್ವಜಗಳನ್ನು ಕಟ್ಟಲಾಗಿತ್ತು. ಹನುಮಾನ, ಶ್ರೀರಾಮನ ಚಿತ್ರ ಇರುವ ಬ್ಯಾನರಗಳು ರಾರಾಜಿಸುತ್ತಿದ್ದವು. ಗ್ರಾಮದ ಪ್ರಮುಖ ದೇವಸ್ಥಾನಗಳಲ್ಲಿ ವಿವಿಧ ಪೂಜಾ ಕರ‍್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ರಾಮ ಮಂದಿರದಲ್ಲಿ ಶ್ರೀರಾಮನಿಗೆ ಪುಷ್ಪಾಲಂಕಾರ ಮಾಡಿ ವಿಶೇಷ ಪೂಜೆ, ಹೋಮ, ರಾಮರಕ್ಷಾ ಸ್ತೋತ್ರ, ಪ್ರಸಾದ ವಿತರಣೆಯನ್ನು ಹಮ್ಮಿಕೊಳ್ಳಲಾಗಿತ್ತು.
ಅಯೋಧ್ಯೆಯಲ್ಲಿ ನಡೆದ ರಾಮ ಲಲ್ಲಾ ಮೂರ್ತಿಯ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದ ನೇರ ವೀಕ್ಷಣೆಗೆ ಎಲ್‌ಇಡಿ ಪರದೆಗಳ ವ್ಯವಸ್ಥೆ ಮಾಡಲಾಗಿತ್ತು ಮತ್ತು ಸಹಸ್ರಾರು ಭಕ್ತರು ನೇರ ಪ್ರಸಾರವನ್ನು ವೀಕ್ಷಣೆ ಮಾಡಿ ಸಂಭ್ರಮಿಸಿದರು. ಗ್ರಾಮದಲ್ಲಿ ಮೆರವಣಿಗೆಯನ್ನು ಸಹ ಹಮಿಕೊಳ್ಳಲಾಗಿತ್ತು.


No comments:
Post a Comment